ಮೈಸೂರು

ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಕೆ: ರೋಷನ್ ಬೇಗ್ ವಿರುದ್ಧ ಪ್ರತಿಭಟನೆ

ಮೈಸೂರು, ಅ.೧೩: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ಅವಹೇಳಕಾರಿ ಪದಗಳನ್ನು ಬಳಿಸಿ ನಿಂದಿಸಿರುವುದನ್ನು ಖಂಡಿಸಿ ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು ವಿವಿಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಪ್ರಧಾನಿಯ ಕುರಿತು ಸಚಿವ ರೋಷನ್ ಬೇಗ್ ಏಕವಚನದಲ್ಲಿ, ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಅಲ್ಲದೇ ರೋಷನ್ ಬೇಗ್ ಅವರು ಕರ್ನಾಟಕದಲ್ಲಿದ್ದುಕೊಂಡು ತಮಿಳಿನಲ್ಲಿ ಮಾತನಾಡುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದಿಂದ ರೋಷನ ಬೇಗ್ ಅವರನ್ನು ಕೈಬಿಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮೈಸೂರು ರಕ್ಷಣಾ ವೇದಿಕೆಯ ಅಧ್ಯಕ್ಷ ಮೈ.ಕಾ.ಪ್ರೇಮಕುಮಾರ್, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಬಿಜೆಪಿ ಮುಖಂಡ ರವಿಶಂಕರ್, ಉಪಾಧಕ್ಷ ಕುಮಾರ್‌ಗೌಡ, ಮೋಹನ್ ಕುಮಾರ್, ಆನಂದ್.ಬಿ, ಚಲುವರಾಜ್, ಜಯಸಿಂಹ, ಸಂದೇಶ್, ರಾಕೇಶ್ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: