
ಕರ್ನಾಟಕ
ರಾಜಾಸೀಟಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ರಾಜ್ಯ(ಮಡಿಕೇರಿ) ಅ.13 :- ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಜಿಲ್ಲಾ ಕೇಂದ್ರ ಪ್ರವಾಸಿ ತಾಣ ರಾಜಾಸೀಟಿಗೆ ಭೇಟಿ ನೀಡಿ ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದರು.
ಸಂಗೀತ ಕಾರಂಜಿಯನ್ನು ಕೂಡಲೇ ಸರಿಪಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ರಾಜಾಸೀಟು ಉದ್ಯಾನವನ ಸಸ್ಯಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ದೇವಕಿ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)