ಕರ್ನಾಟಕ

ಒತ್ತಡಮುಕ್ತ ಬದುಕಿಗೆ ಮಾನಸಿಕ ಆರೋಗ್ಯ ಅಗತ್ಯ : ಆರ್.ಪಿ. ನಂದೀಶ್ ಅಭಿಮತ

ರಾಜ್ಯ(ಚಾಮರಾಜನಗರ) ಅ. 14:- ಒತ್ತಡ ಜೀವನದ ಅವಿಭಾಜ್ಯ ಅಂಗವಾಗಿರುವುದರಿಂದ ಪ್ರತಿಯೊಬ್ಬರ ಒತ್ತಡಮುಕ್ತ ಬದುಕಿಗೆ ಮಾನಸಿಕ ಆರೋಗ್ಯ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ನಂದೀಶ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಕೆ.ಡಿ.ಪಿ ಸಭಾಂಗಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಕೆಲಸ ಮಾಡುವ ಸ್ಥಳದಲ್ಲಿ ಒತ್ತಡ ಇರುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಪೊಲೀಸ್, ವೈದ್ಯರು, ವಕೀಲರು ಹಾಗೂ ಮಾಧ್ಯಮದವರಿಗೆ ಹೆಚ್ಚಿನ ಒತ್ತಡವಿದೆ. ಮೂರರಿಂದ ನಾಲ್ಕು ಮಂದಿಯ ಕೆಲಸವನ್ನು ಒಬ್ಬ ವ್ಯಕ್ತಿ ನಿರ್ವಹಿಸುವುದರಿಂದ ಒತ್ತಡ ಹೆಚ್ಚಾಗುತ್ತಿದೆ. ಆಗ ನೌಕರರ ಆರೋಗ್ಯದ ಬೆಳವಣಿಗೆ ಕುಂಠಿತವಾಗುತ್ತದೆ. ಅದ್ದರಿಂದ ಕೆಲಸ ಮಾಡುವ ವಾತವರಣ ಒತ್ತಡಮುಕ್ತಕ್ಕೆ ಪೂರಕವಾಗಿರಬೇಕು. ಎಂದರು. ವಿಶ್ವದಲ್ಲಿ 30 ಕೋಟಿ ಜನರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಶ್ವಸಂಸ್ಥೆ ಜನರ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರತಿವರ್ಷ ಅ. 10ರಂದು ಮಾನಸಿಕ ಆರೋಗ್ಯ ದಿನ ಆಚರಿಸುವ ಮೂಲಕ ಎಲ್ಲರೂ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಸಲಹೆ ಮಾಡಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್‍ಕುಮಾರ್, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ. ರಾಜು, ಜಿಲ್ಲಾಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಸುಷ್ಮಾ, ನರ್ಸಿಂಗ್ ಶಾಲೆಯ ಪ್ರಾಂಶುಪಾಲ ಮಹಮದ್ ಖದರತ್ ಉಲ್ಲಾ ಮತ್ತಿತರರು ಉಪಸ್ಥಿತರಿದ್ದರು. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: