ಕರ್ನಾಟಕಮೈಸೂರು

ಅ.15-16 : ಮೈಸೂರಿಗೆ ಮುಖ್ಯಮಂತ್ರಿ ಪ್ರವಾಸ

ಮೈಸೂರು (ಅ.14): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 15 ಹಾಗೂ 16 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 15 ರಂದು ಬೆಳಿಗ್ಗೆ 10-45ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಬೆಳಿಗ್ಗೆ 11-30ಕ್ಕೆ ಕೆ.ಆರ್.ನಗರದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಂಜೆ 4-15ಕ್ಕೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆರ್.ಟಿ.ನಗರದಲ್ಲಿ ಆಯೋಜಿಸಿರುವ ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಬೆಂಗಳೂರಿಗೆ ತೆರಳಲಿದ್ದಾರೆ.
(ಎನ್‍ಬಿಎನ್‍)

Leave a Reply

comments

Related Articles

error: