ಮೈಸೂರು

ಹಿರಿಯ ವಿಜ್ಞಾನ ಲೇಖಕ ಜೆ.ಆರ್. ಲಕ್ಷ್ಮಣ್ ರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ರಿ ಪ್ರದಾನ

ಹಿರಿಯ ವಿಜ್ಞಾನ ಲೇಖಕ ಜೆ.ಆರ್. ಲಕ್ಷ್ಮಣ್ ರಾವ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.

ಮೈಸೂರಿನ ಸರಸ್ವತಿಪುರಂನ 12ನೇ ಮುಖ್ಯ ರಸ್ತೆಯಲ್ಲಿರುವ ಅವರ ಮನೆಗೆ ತೆರಳಿ ಜೆ.ಆರ್. ಲಕ್ಷ್ಮಣ್‍ ರಾವ್ ಅವರನ್ನು ಪತ್ನಿ ಶಾಂತಾಬಾಯಿ ಅವರೊಂದಿಗೆ ಅಭಿನಂದಿಸಿ ರಾಜ್ಯ ಸರ್ಕಾರದ ಪರವಾಗಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಲಕ್ಷ ರು. ಮೊತ್ತದ ಚೆಕ್ ವಿತರಿಸಿದರು.

ನಂತರ ಮಾತನಾಡಿದ ಸಚಿವೆ ಉಮಾಶ್ರೀ, ವೃದ್ಧಾಪ್ಯ ಹಾಗೂ ಅನಾರೋಗ್ಯ ಕಾರಣಗಳಿಂದಾಗಿ ನ.1ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿರಲಿಲ್ಲ. ಆದ್ದರಿಂದ ಅವರ ನಿವಾಸಕ್ಕೆ ಭೇಟಿ ನೀಡಿ ಶಾಸಕ ವಾಸು, ಮಾಜಿ ಮೇಯರ್ ಆರ್.ಲಿಂಗಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದೇನೆ ಎಂದು ಹೇಳಿದರು.

ಹಿರಿಯ ವಿಜ್ಞಾನ ಲೇಖಕ ಜೆ.ಆರ್. ಲಕ್ಷ್ಮಣ್ ರಾವ್ ಅವರ ಹಿರಿತನ ಹಾಗೂ ವಿಜ್ಞಾನ ವಿಭಾಗದಲ್ಲಿ ಅವರು ಸಲ್ಲಿಸಿರುವ ಸೇವೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಸಂತಸವಾಗಿದೆ ಎಂದರು.

Leave a Reply

comments

Related Articles

error: