ಪ್ರಮುಖ ಸುದ್ದಿ

ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಯ ಮನವರಿಕೆ: ಎ.ಮಂಜು

ಪ್ರಮುಖ ಸುದ್ದಿ, ಹಾಸನ, ಅ.೧೪: ಮನೆ ಮನೆಗೆ ಕಾಂಗ್ರೆಸ್ ಎಂಬ ಅಡಿಯಲ್ಲಿ ಸರಕಾರದ ೫ ವರ್ಷದ ಸಾಧನೆಯನ್ನು ಪ್ರತಿ ಮನೆ ಮನೆಗೂ ತಿಳಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಹಾಸನ ಉಸ್ತುವಾರಿ ಶಾರದಗೌಡ, ಹುಡ ಅಧ್ಯಕ್ಷ ಕೃಷ್ಣಕುಮಾರ್, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ಲಲಿತಮ್ಮ, ಮುಖಂಡ ಹೆಚ್.ಕೆ. ಮಹೇಶ್, ಮೋಹನ್ ಕುಮಾರ್ ಸೇರಿದಂತೆ ಇತರರು ನಗರದ ಸಮೀಪ ಇರುವ ಸತ್ಯಮಂಗಲದಲ್ಲಿರುವ ನಿವಾಸಕ್ಕೆ ತೆರಳಿ ಅರಿವು ಮೂಡಿಸಿದರು.
ಇದಕ್ಕೂ ಮೊದಲು ಸತ್ಯಮಂಗಲ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರೀ ಸಿದ್ದಿವಿನಾಯಕ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು. ಈ ವೇಳೆ ಮಾತನಾಡಿದ ಸಚಿವ ಎ.ಮಂಜು, ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಚುನಾವಣೆ ವೇಳೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿzವೆ. ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿzವೆ. ಈ ಮೂಲಕ ಸರ್ಕಾರದ ಸಾಧನೆಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುತ್ತಿzವೆ ಎಂದು ಹೇಳಿದರು. (ವರದಿ ಬಿ.ಎಂ)
 

 

Leave a Reply

comments

Related Articles

error: