ಪ್ರಮುಖ ಸುದ್ದಿ

ಯತ್ರೀಂದ್ರ ಸಿದ್ದರಾಮಯ್ಯ ಕ್ಷೇತ್ರ ಪ್ರವಾಸ: ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ

ಪ್ರಮುಖ ಸುದ್ದಿ, ತಾಂಡವಪುರ, ಅ.೧೪: ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಯುವ ಮುಖಂಡ ಹಾಗೂ ವರುಣಾ ಕ್ಷೇತ್ರದ ಆಶ್ರಯ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕರು ಸಮಸ್ಯೆಗಳ ಸುರಿಮಳೆಯನ್ನೇ ಸುರಿಸಿದರು.
ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಯತೀಂದ್ರ ಸಿದ್ದರಾಮಯ್ಯನವರಿಗೆ ಕ್ಷೇತ್ರದ ಜನರು ತಮ್ಮ ಸಮಸ್ಯೆಗಳು ಹಾಗೂ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಒಳಚರಂಡಿ, ಸ್ಮಶಾನ, ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ಅಹವಾಲು ಸ್ವೀಕರಿಸಿ ಮಾತನಾಡಿದ ಯತೀಂದ್ರ, ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಈ ಎಲ್ಲಾ ಸಮಸ್ಯೆಗಳನ್ನು ನಾನೇ ಗಮನಿಸಿzನೆ. ಆದ್ದರಿಂದ ಈ ಎಲ್ಲಾ ಸಮಸ್ಯೆಗಳನ್ನು ನಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದು ಬಗೆಹರಿಸುವುದಾಗಿ ತಿಳಿಸಿದರಲ್ಲದೆ, ಕ್ಷೇತ್ರದ ಜನತೆಯ ಪರವಾಗಿ ಸದಾ ಶ್ರಮಿಸಲು ಸಿದ್ಧನಿzನೆ. ಮುಂದಿನ ಚುನಾವಣೆಯಲ್ಲಿ ನಮ್ಮ ತಂದೆ ಸಿದ್ದರಾಮಯ್ಯನವರು ಸ್ಪರ್ಧಿಸುತ್ತಿದ್ದು, ಹಿಂದೆ ನೀಡಿದ ಸಹಕಾರವನ್ನು ಇನ್ನು ಮುಂದೆಯೂ ಮುಂದುವರೆಸಿಕೊಂಡು ಹೋಗಬೇಕು ಮನವಿ ಮಾಡಿದರು.
ಈ ವೇಳೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಮಾಜಿ ಶಾಸಕ ಸತ್ಯನಾರಾಯಣ, ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ, ಮೂಡಾ ಅಧ್ಯಕ್ಷ ಡಿ.ಧ್ರುವಕುಮಾರ್, ತಾ.ಪಂ ಸದಸ್ಯರಾದ ಮುದ್ದರಾಮೇಗೌಡ, ರಾಜ್ಯ ಅಹಿಂದ ಉಪಾಧ್ಯಕ್ಷ ನಜರಬಾದ್ ನಟರಾಜು, ರಾಜ್ಯ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿ ಬಳಗದ ಅಧ್ಯಕ್ಷ ನರೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: