ಕರ್ನಾಟಕಪ್ರಮುಖ ಸುದ್ದಿ

ಬೇರೆ ಪಕ್ಷಗಳ ಹಲವು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ : ಬಿ.ಎಸ್.ಯಡಿಯೂರಪ್ಪ

ರಾಜ್ಯ(ಬೆಂಗಳೂರು)ಅ.14:- ಕೇಂದ್ರದ ಮಾಜಿ ಸಚಿವ .ಎಂ.ಎಸ್. ಗುರುಪಾದಸ್ವಾಮಿ ಅವರ ಪುತ್ರ ಎಂ.ಜಿ. ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ಪಕ್ಷದ ಕಛೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಎಂ.ಜಿ. ಪ್ರಕಾಶ್, ನಾಗಮಂಗಲದ ಯುವ ಮುಖಂಡ ಗೋಪಾಲ ಕೃಷ್ಣೇಗೌಡ ಸೇರಿದಂತೆ ಮೈಸೂರಿನ ಕ್ರೈಸ್ತ ಹಾಗೂ ಮುಸ್ಲಿಂ ಸಮುದಾಯದ ಅನೇಕ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಶಾಲು ಹೊದಿಸಿ ಬರ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿಗೆ ಹಲವು ಮುಖಂಡರು ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯ ಪಕ್ಷಗಳ ಹಲವು ಹಾಲಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದರು. ಬೇರೆ ಪಕ್ಷಗಳ ಹಲವು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ತಿಂಗಳ ನಂತರ ಈ ಶಾಸಕರ ಸೇರ್ಪಡೆ ನಡೆಯಲಿದೆ ಎಂದು ಅವರು ಹೇಳಿದರು. ಎಲ್ಲರ ಸಹಕಾರದಿಂದ ಮಿಷನ್ 150 ಗುರಿಯನ್ನು ಸಾಧಿಸಲಾಗುವುದು ಎಂದು ಅವರು ಹೇಳಿದರು. ಕೇಂದ್ರದ ಪೆಟ್ರೋಲಿಯಂ ಸಚಿವರ ವಿರುದ್ಧ ಏಕ ವಚನ ಪ್ರಯೋಗ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸೊಕ್ಕು, ಧಿಮಾಕು ಹೆಚ್ಚಾಗಿದೆ. ಒಬ್ಬ ಕೇಂದ್ರ ಸಚಿವರ ಬಗ್ಗೆ ಏಕ ವಚನ ಬಳಕೆ ಅಕ್ಷಮ್ಯ ಅಪರಾಧ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ಸಚಿವ ರೋಷನ್ ಬೇಗ್ ಸಹ ಪ್ರಧಾನಿ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡುತ್ತಾರೆ. ಇಂತಹವರನ್ನು ಸಂಪುಟದಲ್ಲಿ ಇಟ್ಟುಕೊಳ್ಳುವುದು ತರವಲ್ಲ ಕೂಡಲೇ ಸಂಪುಟದಿಂದ ರೋಷನ್ ಬೇಗ್ ರವರನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ರೇವಣಸಿದ್ದಯ್ಯ ತುರ್ತಾಗಿ ಬೇರೆ ಊರಿಗೆ ಹೋಗಿದ್ದರಿಂದ ಇಂದು ಪಕ್ಷಕ್ಕೆ ಸೇರ್ಪಡೆಯಾಗಲಿಲ್ಲ. ಇನ್ನು 3-4 ದಿನಗಳಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಆರ್. ಅಶೋಕ್, ವಿ. ಸೋಮಣ್ಣ, ಶೋಭಾಕರಂದ್ಲಾಜೆ, ಅಬ್ದುಲ್ ಹಸೀಮ್,ಮಾದೇಗೌಡ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: