
ಮೈಸೂರು
ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಉರುಳಿದ ಬಂಡೆ
ಮೈಸೂರು,ಅ.15:- ಚಾಮುಂಡಿ ಬೆಟ್ಟದ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದ್ದು,ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚಾಮುಂಡಿ ಬೆಟ್ಟದ ರಸ್ತೆಯ ಕೆ.ಆರ್.ಮಿಲ್ ಗೆಸ್ಟ್ ಹೌಸ್ ಬಳಿ ಭಾನುವಾರ ಮಧ್ಯಾಹ್ನ 3ರ ಸಮಯದಲ್ಲಿ ಭಾರೀ ಬಂಡೆಯೊಂದು ಉರುಳಿ ಬಿದ್ದಿದೆ. ಇತ್ತೀಚಿಗೆ ಸುರಿದ ಭಾರಿಮಳೆಯಿಂದ ಬಂಡೆ ಉರುಳಿದೆ ಎನ್ನಲಾಗಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಕೆ.ಆರ್.ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರಲ್ಲದೇ ಬಂಡೆ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. (ಕೆ.ಎಸ್,ಎಸ್.ಎಚ್)