ಪ್ರಮುಖ ಸುದ್ದಿಮೈಸೂರು

ದಲಿತ ಅರ್ಚಕರನ್ನು ನೇಮಕ ಮಾಡಲು ನಮ್ಮ ವಿರೋಧ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಅ.15:- ಕೇರಳದಲ್ಲಿ ದಲಿತರನ್ನು ಮುಜರಾಯಿ ಅರ್ಚಕರಾಗಿ ನೇಮಕ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲೂ ನೇಮಕ ಮಾಡಲು ನಾವು ಮುಕ್ತ ಮನಸ್ಸು ಹೊಂದಿದ್ದೇವೆ. ದಲಿತ ಅರ್ಚಕರನ್ನು ನೇಮಕ ಮಾಡಲು ನಮ್ಮ ವಿರೋಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಕೆ.ಆರ್.ನಗರದಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಬಿಜೆಪಿ ಕರ್ನಾಟಕ ಪರಿವರ್ತನಾ ರ್ಯಾಲಿ ನಡೆಸಿದ್ದಾರೆ.ಅವರ ಲೆಕ್ಕದಲ್ಲಿ  ಪರಿವರ್ತನೆ ಅಂದ್ರೆ ಸಮಾಜದ ಪರಿವರ್ತನೆ ಅಲ್ಲ. ಸಮಾಜ ಒಡೆಯುವ ಪರಿವರ್ತನೆ. ಬಿಜೆಪಿ ಯವರು ಯಾವಾಗಲಾದರೂ ಮಹಿಳೆಯರ, ರೈತರ ಬಗ್ಗೆ ಮಾತಾನಾಡಿದ್ದಾರಾ, ಸಾಮಾಜಿಕ ನ್ಯಾಯದ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದರು.ಮೈಸೂರು ಮಿನರಲ್ಸ್ ಲಿಮಿಟೆಡ್ ನಿಂದ ಸಾಲ ಮನ್ನಾದ ಹಣವನ್ನು ಅಪೆಕ್ಸ್ ಬ್ಯಾಂಕ್ ಗೆ ನೀಡಿದ್ದಾರೆ ಎನ್ನುವ  ಯಡಿಯೂರಪ್ಪ ಹೇಳಿಕೆಗೆ ಸಿಎಂ ಸ್ಪಷ್ಟೀಕರಣ ನೀಡಿದ್ದು, ಮೈಸೂರು ಮಿನರಲ್ಸ್ ನಲ್ಲಿನ ಹಣ ಸರ್ಕಾರದ್ದು. ತುರ್ತು ಕಾರಣಕ್ಕೆ ಅದನ್ನು ಬಳಸಿದ್ದೇವೆ . ಮುಂದಿನ ಬಜೆಟ್ ನಲ್ಲಿ ಆ ಹಣವನ್ನು ಅವರಿಗೆ ವಾಪಸ್ ನೀಡುತ್ತೇವೆ. ಇದರಲ್ಲಿ ಯಾವುದೇ ತಪ್ಪು ಇಲ್ಲ. ಇದು ಸಾಮಾನ್ಯ ಪ್ರಕ್ರಿಯೆ. ಹಣಕಾಸು ವ್ಯವಸ್ಥೆ ಬಗ್ಗೆ ಯಡಿಯೂರಪ್ಪಗೆ ಕನಿಷ್ಠ ಜ್ಞಾನವು ಇಲ್ಲ.ಮುಖ್ಯಮಂತ್ರಿ, ಹಣಕಾಸು ಸಚಿವರಾಗಿದ್ದವರಿಗೆ ಈ ಸಾಮಾನ್ಯ ಜ್ಞಾನ ಇರಬೇಕಿತ್ತು ಎಂದರು. ಕಾಂಗ್ರೆಸ್ ಕೆಲವು ಮುಖಂಡರು ಸಿಎಂ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: