ಕರ್ನಾಟಕ

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ : ಅರ್ಜಿ ಆಹ್ವಾನ

ಮಂಡ್ಯ (ಅ.16): ಕರ್ನಾಟಕ ರಾಜ್ಯ ಉಪನ್ಯಾಸಕ ಅರ್ಹತಾ ಪರೀಕ್ಷೆ (ಕೆ-ಎಸ್.ಇ.ಟಿ)ಯನ್ನು, 39 ವಿಷಯಗಳಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಆಯ್ದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ “ಆನ್‍ಲೈನ್” ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇಕಡ 55% ಅಂಕಗಳಿಸಿ ತೇರ್ಗಡೆ ಹೊಂದಿರಬೇಕು ಮತ್ತು ಇತರೆ ಹಿಂದುಳಿದ ವರ್ಗದ, ಪ.ಜಾ./ಪ.ಪಂಗಡದ ಅಭ್ಯರ್ಥಿಗಳು ಶೇಕಡ 50% ಅಂಕಗಳಿಸಿ ತೇರ್ಗಡೆ ಹೊಂದಿರಬೇಕು. ಅಂತಿಮ ವರ್ಷದ ಸ್ನಾತಕೋತ್ತರ ಪದವಿ (ಪಿ.ಜಿ) ವ್ಯಾಸಂಗ ಮಾಡುತ್ತಿರುವವರೂ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

ಅರ್ಜಿಗಳನ್ನು ಆನ್‍ಲೈನ್ ಮೂಲಕ http://kset.uni-mysore.ac.in ಅಥವಾ ಲಭ್ಯವಿರುವ ಮೈಸೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್: uni-mysore.ac.in ನ ಮೂಲಕವೂ ಮೇಲಿನ ವೆಬ್‍ಸೈಟ್‍ಗೆ ಹೋಗಬಹುದು.

ಹೆಚ್ಚಿನ ಮಾಹಿತಿಗೆ ಮೈಸೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್: uni-mysore.ac.in ನಲ್ಲಿ ಪರೀಕ್ಷಾ ಕೇಂದ್ರ, ಪರೀಕ್ಷಾ ವಿಧಾನ ಮತ್ತು ಪರಿಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು ಅಥವಾ ಉಪ ಮುಖ್ಯಸ್ಥರು, ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ, ಗ್ರಂಥಾಲಯ ಕಟ್ಟಡ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು. ಇಲ್ಲಿಗೆ ಭೇಟಿ ನೀಡಿ ಪಡೆಯಬಹುದು.

(ಎನ್‍ಬಿಎನ್‍)

Leave a Reply

comments

Related Articles

error: