ಮೈಸೂರು

ನಿರ್ಜನ ಪ್ರದೇಶದಲ್ಲಿ ಪಟಾಕಿ ಸಿಡಿಸುವಂತೆ ಜಿಲ್ಲಾಧಿಕಾರಿ ರಂದೀಪ್ ಸೂಚನೆ

ಮೈಸೂರು (ಅ.17): ಈ ವರ್ಷದ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯ ನಿಯಂತ್ರಿಸಲು ಸಾರ್ವಜನಿಕರು ನಗರ ಮತ್ತು ಪಟ್ಟಣಗಳಲ್ಲಿ ನಿರ್ಜನ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಸಾಮೂಹಿಕವಾಗಿ ಪಟಾಕಿ ಸಿಡಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಮನವಿ ಮಾಡಿದ್ದಾರೆ.

ಭಾರತ ಸರ್ಕಾರವು ಪರಿಸರ ಕಾಯ್ದೆ, 1986ರ ತಿದ್ದುಪಡಿ 1999ಮತ್ತು 2000 ಅಡಿ ಜಿಲ್ಲೆಯಲ್ಲಿ ಪಟಾಕಿಗಳು ಸಿಡಿಯುವ ಜಾಗದಿಂದ ನಾಲ್ಕು ಮೀಟರ್ ದೂರದಲ್ಲಿ 125 dB (A1) ಅಥವಾ 145 dB (c) pk ಗಿಂತ ಅಧಿಕ ಶಬ್ದ ಉಂಟು ಮಾಡುವ ಪಟಾಕಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಪಟಾಕಿ ಸರಗಳಿಗೆ ಶಬ್ದ ಮಿತಿಯು 5 log(N) db ಅಷ್ಟು ಕಡಿಮೆ ಇರಬೇಕು (ಎನ್ ಎಂದರೆ ಪಟಾಕಿ ಸರದಲ್ಲಿರುವ ಪಟಾಕಿಗಳ ಸಂಖ್ಯೆ) ರಾತ್ರಿ 10ರಿಂದ ಬೆಳಿಗ್ಗೆ 6ರ ವರಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಶಾಲಾ ಆವರಣ ಮತ್ತು, ವಸತಿ ಪ್ರದೇಶ, ಕೈಗಾರಿಕ ಪ್ರದೇಶಗಳಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವುದನ್ನು ನಿರ್ಭಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: