ಮೈಸೂರು

ನಂಜನಗೂಡು ಉಪಚುನಾವಣೆ: ಕನ್ನಡ ಪರ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ

ಕನ್ನಡ ಪರ ಸಂಘಟನೆಯಿಂದ ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಗೆ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್ ತಿಳಿಸಿದರು.

ಅವರು, ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ನಂಜನಗೂಡು ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದು ಸೂಕ್ತ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾರ್ಯಕರ್ತರು ಹಾಗೂ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಂಡು ದಲಿತ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು. ಇಲ್ಲವಾದಲ್ಲಿ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಲಾಗುವುದು. ನಾನು ಕೂಡ ಹಲವಾರು ಸಾಮಾಜಿಕ ಹೋರಾಟಗಳಲ್ಲಿ ಪಾಲ್ಗೊಂಡು ಸಮಾಜಮುಖಿಯಾಗಿ ಕೆಲಸ ಮಾಡಿದ್ದೇನೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ಸೋಗಹಳ್ಳಿ ತುಂಗಾ, ಪ್ರಧಾನ ಕಾರ್ಯದರ್ಶಿ ಎಸ್. ಗುರುಶಂಕರ್, ಉಪಾಧ್ಯಕ್ಷ ಹೆಚ್.ಕೆ. ಬಸವರಾಜು, ಸಹಕಾರ್ಯದರ್ಶಿ ಸುರೇಶ್ ಮತ್ತು ಸ್ವಾಮಿ ಉಪಸ್ಥಿತರಿದ್ದರು.

Leave a Reply

comments

Related Articles

error: