
ಕರ್ನಾಟಕ
ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ವಿತರಣೆ
ಸೋಮವಾರಪೇಟೆ,ಅ.17-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಉಜ್ವಲ ಯೋಜನೆಯಡಿ ಶಾಂತಳ್ಳಿ ವ್ಯಾಪ್ತಿಯ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಲಾಯಿತು. ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಫಲಾನುಭವಿಗಳಿಗೆ ಅಡುಗೆ ಅನಿಲದ ಸಿಲಿಂಡರ್ ಮತ್ತು ಸ್ಟೌವ್ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಉಚಿತವಾಗಿ ಗ್ಯಾಸ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ದೇಶದ ಮಹಿಳೆಯರು ಅನುಭವಿಸುತ್ತಿದ್ದ ಸಂಕಷ್ಟಗಳನ್ನು ಮನಗಂಡ ಪ್ರಧಾನಿ ಮೋದಿ ಈ ವಿನೂತನ ಯೋಜನೆ ಜಾರಿಗೆ ತಂದಿದ್ದು, ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಶಾಂತಳ್ಳಿ ನವದೀಪ್ ಗ್ಯಾಸ್ ಏಜೆನ್ಸಿಯ ಮಾಲೀಕರಾದ ಅಕ್ಷತಾ, ಸ್ಥಳೀಯರಾದ ಪ್ರತಾಪ್ ಸೇರಿದಂತೆ ಇತರರು ಇದ್ದರು. (ವರದಿ-ಕೆಸಿಐ, ಎಂ.ಎನ್)