ಮೈಸೂರು

ಟಿಪ್ಪು ಜಯಂತಿ ಆಚರಣೆಗೆ ವಿರೋಧ : ಬಿಜೆಪಿ ನಾಯಕರ ಬಂಧನ; ಬಿಡುಗಡೆ

bjp-2-webಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವುದನ್ನು ವಿರೋಧಿಸಿ ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿದಂತೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಸಚಿವೆ ಶೋಭಾ ಕರಾಂದ್ಲಾಜೆ, ಟಿಪ್ಪು ಒಬ್ಬ ಮತಾಂಧ. ತನ್ನ ಸಿಂಹಾಸನವನ್ನು ಉಳಿಸಿಕೊಳ್ಳುವ ಉದ್ದೇಶದಿಂದಷ್ಟೇ ಬ್ರಿಟಿಷರೊಡನೆ ಯುದ್ಧ ಮಾಡಿದ್ದು ಬಿಟ್ಟರೆ ಆತ ಹಿಂದೂ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಎಂದರು. ಟಿಪ್ಪು ಅಸಂಖ್ಯಾತ ದೇವಾಲಯಗಳನ್ನು ನಾಶ ಮಾಡಿದ್ದಾನೆ. ಹೀಗಿರುವಾಗ ರಾಜ್ಯ ಸರ್ಕಾರ ಜನರ ವಿರೋಧವನ್ನು ಲೆಕ್ಕಿಸದೇ ಟಿಪ್ಪು ಜಯಂಯತಿಯನ್ನು ಆಚರಿಸಲು ಮುಂದಾಗುತ್ತಿದೆ ಎಂದರು.

ರಾಜ್ಯದಲ್ಲಿ 14 ಕ್ಕೂ ಹೆಚ್ಚು ಮಂದಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ.  ಈ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಕೊಲೆ ಪ್ರಕರಣಗಳನ್ನು ಸಿಬಿಐ ಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ ಬಿಜೆಪಿ ಕಾರ್ಯಕರ್ತ ರವಿ ಕೊಲೆಯ ಉದ್ದೇಶವೇ ಹಿಂದೂ ಪರ ಸಂಘಟನೆಗಳಲ್ಲಿ ತೊಡಗಿದವರನ್ನು ನಾಶಪಡಿಸುವುದಾಗಿದೆ. ರಾಜ್ಯಾದ್ಯಂತ ಅನೇಕ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬದಲಾಗಿ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿದೆ. ಇದರಿಂದ ರಾಜ್ಯದಲ್ಲಿ ಹಿಂದೂಗಳ ಭಾವನೆಗಳಗೆ ಬೆಲೆ ಇಲ್ಲದಂತಾಗಿದೆ ಎಂದರು.

ಪ್ರತಿಭಟನಾಕಾರರು ಮೆರವಣಿಗೆಗೆ ಅವಕಾಶ ನೀಡದಿರುವುದಕ್ಕೆ ಉದ್ರಿಕ್ತರಾಗಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ,ಮಾಜಿ ಸಚಿವ ಎಸ್.ಎ.ರಾಮದಾಸ್ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಮತ್ತು  ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವೆ ಶೋಭಾ ಕರಾಂದ್ಲಾಜೆ,ನಗರಾಧ್ಯಕ್ಷ ಮಂಜುನಾಥ್, ಮಾಜಿ ಸಚಿವ ರಾಮದಾಸ್, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್. ಮಂಜುನಾಥ್, ಬಜೆಪಿ ರೈತ ಮೋರ್ಚಾದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ ಉಪಸ್ಥಿತರಿದ್ದರು.

Leave a Reply

comments

Related Articles

error: