ಮೈಸೂರು

ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಮೈಸೂರು,ಅ.19:- ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಪುರುಷನ ಶವವೊಂದು ಪತ್ತೆಯಾಗಿದೆ.

ಗುರುವಾರ ಬೆಳಿಗ್ಗೆ ಕುಕ್ಕರಹಳ್ಳಿ ಕೆರೆಯ ಬಳಿ ವಾಯು ವಿಹಾರಿಗಳು ಬಂದಾಗ ಕೆರೆಯ ಮಧ್ಯ ಭಾಗದಲ್ಲಿ ಶವ ತೇಲುತ್ತಿರುವುದು ಕಂಡು ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಕಳೆದೆರಡು ದಿನಗಳ ಹಿಂದೆ ಕೆರೆಯಗೆ ಹಾರಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕಾಗಮಿಸಿದ ಜಯಲಕ್ಷ್ಮೀಪುರಂ ಪೊಲೀಸರು ಶವವನ್ನು ಮೇಲೆತ್ತುವ ಕಾರ್ಯ ನಡೆಸಿದ್ದಾರೆ. ಆದರೆ  ಅವರು ಯಾರು? ಎಲ್ಲಿಯವರು ಎಂಬ ಕುರಿತು ಮಾಹಿತಿಗಳು ಲಭ್ಯವಾಗಿಲ್ಲ. ತನಿಖೆಯ ಬಳಿಕವೇ ತಿಳಿದುಬರಬೇಕಿದೆ. ಇತ್ತೀಚೆಗೆ ಕುಕ್ಕರಹಳ್ಳಿ ಕೆರೆಗೆ ಹೋಗಿ ಪ್ರಾಣಕಳೆದುಕೊಳ್ಳುವವವರ ಸಂಖ್ಯೆ ಹೆಚ್ಚುತ್ತಿದ್ದು, ಈ ರೀತಿ ಆಗದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: