ಕರ್ನಾಟಕ

ಬಹಿರ್ದೆಸೆಗೆಂದು ಮನೆಯಿಂದ ಹೋದವಳು ಶವವಾಗಿ ಪತ್ತೆ

ಕೋಲಾರ,ಅ.19: ರಾತ್ರಿ  ಮನೆಯಿಂದ ಹೊರಗೆ ಹೋಗಿದ್ದ ಕಾವ್ಯಾ ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ  ಘಟನೆ ಕೋಲಾರ ತಾಲೂಕಿನ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ನಡೆದಿದೆ.

  ಕಾವ್ಯಾ(20) ಮೃತ ಯುವತಿ. ಬುಧವಾರ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಕಾವ್ಯಾ ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆ ಕೂಲಿ ಕೆಲಸ ಮಾಡುತ್ತಿದ್ದಳು. ಕಾವ್ಯಾ ರಾತ್ರಿ ಬಹಿರ್ದೆಸೆಗೆಂದು ಹೊರಗೆ ಹೋಗಿದ್ದಳು. ಆದರೆ ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಯಾರೋ ಕಿಡಿಗೇಡಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ  ದಾಖಲಾಗಿದೆ. ( ವರದಿ : ಪಿ. ಎಸ್ )

Leave a Reply

comments

Related Articles

error: