ಕರ್ನಾಟಕಪ್ರಮುಖ ಸುದ್ದಿ

ಈಜಿಪುರ ಕಟ್ಟಡ ದುರಂತ: ಗಾಯಾಳುಗಳನ್ನು ಭೇಟಿಯಾದ ರಾಮಲಿಂಗಾ ರೆಡ್ಡಿ

ಬೆಂಗಳೂರು,ಅ.19-ಅ.16 ರಂದು ಈಜಿಪುರ ಕಟ್ಟಡ ದುರಂತದಲ್ಲಿ ಗಾಯಗೊಂಡವರನ್ನು ಸಚಿವ ರಾಮಲಿಂಗಾ ರೆಡ್ಡಿ ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ದುರಂತದಲ್ಲಿ ಮೂರು ವರ್ಷದ ಸಂಜನಾ ಸೇರಿದಂತೆ ಹಲವರನ್ನು ರಕ್ಷಿಸಲಾಗಿತ್ತು.

ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್ ಸಂಪತ್ ರಾಜ್ ಗಾಯಾಳುಗಳ ಆರೋಗ್ಯ ವಿಚಾರಿಸಿ ಸಂಜನಾ ಪೋಷಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ವೈದ್ಯರೊಂದಿಗೆ ಗಾಯಾಳುಗಳ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು.

ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಅವಶೇಷಗಳಡಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿತ್ತು. ಕಟ್ಟಡ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಘೋಷಣೆ ಮಾಡಿದ್ದಾರೆ. (ವರದಿ-ಎಂ.ಎನ್)

 

Leave a Reply

comments

Related Articles

error: