ಮೈಸೂರುಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಪಕ್ಷಕ್ಕೆ ವಿ. ರಾಮಸ್ವಾಮಿ ರಾಜೀನಾಮೆ

ಕೆಪಿಸಿಸಿ ಸದಸ್ಯ ಮೈಸೂರಿನ ವಿ. ರಾಮಸ್ವಾಮಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ  ಹೇಳಿಕೆ ಬಿಡುಗಡೆ ಮಾಡಿರುವ ಅವರು ಪಕ್ಷದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಮೂವತ್ತು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷದ ಸಂಘಟನೆಗೆ ದುಡಿದಿದ್ದೇನೆ. ಆದರೆ ಪಕ್ಷ ನನ್ನ ಶ್ರಮವನ್ನು ಗುರುತಿಸದೇ ಇರುವುದು ಬೇಸರ ತರಿಸಿದೆ. ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವುದು ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ ಹಾಗೂ ಪಕ್ಷದಲ್ಲಿನ ಬೆಳವಣಿಗೆಗಳು ನನಗೆ ಬೇಸರ ತರಿಸಿವೆ ಎಂದು ತಮ್ಮ ಅಳಲು ತೋಡಿಕೊಂಡಿರುವ ಅವರು, ಸ್ವ-ಇಚ್ಛೆಯಿಂದ ಕೆಪಿಸಿಸಿ ಸದಸ್ಯತ್ವಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

Leave a Reply

comments

Related Articles

error: