ಕರ್ನಾಟಕಪ್ರಮುಖ ಸುದ್ದಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ : ಕಾಲ್ತುಳಿತಕ್ಕೆ ಸಿಲುಕಿ ಹಲವರಿಗೆ ಗಾಯ

ರಾಜ್ಯ(ಚಾಮರಾಜನಗರ)ಅ.20:- ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ ಜರುಗಿದ್ದು, ಭಾರಿ ಜನಸ್ತೋಮ ,ಮಹದೇವನ ದರುಶನ ಪಡೆಯಲು ಲಕ್ಷಾಂತರ ಭಕ್ತರು ಆಗಮಿಸಿದ್ದರು.

ಮಹಾರಥೋತ್ಸವದ ವೇಳೆ ನೂಕು ನುಗ್ಗಲು  ಉಂಟಾಗಿದ್ದು, ಕಾಲ್ತುಳಿತಕ್ಕೆ ಸಿಲುಕಿ  ಹಲವರಿಗೆ ಗಾಯಗಳಾಗಿದೆ.ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ  ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಜನರನ್ನು ನಿಯಂತ್ರಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: