ಸುದ್ದಿ ಸಂಕ್ಷಿಪ್ತ

ಅ.23 : ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

ಮಡಿಕೇರಿ,ಅ.21:- ಜಿಲ್ಲಾಡಳಿತ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಕ್ಟೋಬರ್, 23 ರಂದು ಬೆಳಗ್ಗೆ 11 ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರೇಷ್ಮೆ ಮಹಾಮಂಡಳಿ ನಿಗಮ ನಿಯಮಿತದ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಸಿದ್ದರಾಜು, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

Check Also

Close
error: