ದೇಶ

ಮುಂಬೈಯಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ಕ್ರಮ: ಶಿವಸೇನೆ

ಮುಂಬೈ: ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದ ಮರಾಠಿಗರ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಮಸಿ ಬಳಿದಿರುವುದನ್ನು ತೀವ್ರವಾಗಿ ಖಂಡಿಸಿರುವ ಶಿವಸೇನೆ, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಮೇಲೂ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಹಲವು ಮಂದಿ ಕನ್ನಡಿಗರು ಮುಂಬೈ, ಮಹಾರಾಷ್ಟ್ರದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಬಗ್ಗೆ ನಮಗೆ ಕಾಳಜಿ ಇದೆ. ಆದರೆ, ಮರಾಠಿ ಮತ್ತು ಕನ್ನಡಿಗರ ಮಧ್ಯೆ ಮತ್ತೆ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಈಗ ಕನ್ನಡಿಗರು ನಮಗೆ ಸುರಕ್ಷಿತರಲ್ಲ ಎಂದು ಶಿವಸೇನೆ ತನ್ನ ಪಕ್ಷದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ರವಾನಿಸಿರುವ ಶಿವಸೇನೆ, ಪ್ರತೀ ಕರ್ನಾಟಕ ರಾಜ್ಯೋತ್ಸವದ ದಿನ ಮರಾಠಿ ಸಂಘಟನೆಗಳು ಕರಾಳ ದಿನ ಆಚರಿಸುತ್ತವೆ. ಬೆಳಗಾವಿಯಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೆದಿರುವುದು ನಿಜಕ್ಕೂ ಖಂಡನೀಯ. ಪೊಲೀಸರ ವಿರುದ್ಧ ಕೇಸ್ ದಾಖಲಿಸಬೇಕೆಂದು ತಿಳಿಸಿದೆ.

ಮಹಾರಾಷ್ಟ್ರ ಸರಕಾರವು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿ ಮರಾಠಿಗರಿಗೆ ಏನು ಮಾಡಿದ್ದಾರೋ, ಅದನ್ನೇ ಮಾಡುವ ಸಾಮರ್ಥ್ಯ ಮಹಾರಾಷ್ಟ್ರಕ್ಕಿದೆ. ಶಿವಸೇನೆಯ ಕೊಲ್ಲಾಪುರ ಕಾರ್ಯಕರ್ತರು ಈಗಾಗಲೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದೆ.

Leave a Reply

comments

Related Articles

error: