ಸುದ್ದಿ ಸಂಕ್ಷಿಪ್ತ
ಅ.23 : ವಿಭಾಗ ಮಟ್ಟದ ಹಾಕಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ
ಮಡಿಕೇರಿ,ಅ.21:-ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ಬಾಲಕಿಯರ ಹಾಕಿ ಪಂದ್ಯಾವಳಿ 2017-18ರ ಉದ್ಘಾಟನಾ ಸಮಾರಂಭವು ಅಕ್ಟೋಬರ್, 23 ರಂದು ಬೆಳಗ್ಗೆ 10 ಗಂಟೆಗೆ ನಗರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪಸಿಂಹ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕೊಂಡ ಶಶಿ ಸುಬ್ರಮಣಿ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)