ಸುದ್ದಿ ಸಂಕ್ಷಿಪ್ತ

ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸೋಮವಾರಪೇಟೆ,ಅ.22:-  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ಸ್ಪರ್ಧೆಯಲ್ಲಿ ಇಲ್ಲಿನ ಓ.ಎಲ್.ವಿ. ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ತನ್ವಿತಾ ಶೆಟ್ಟಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಮಿಮಿಕ್ರಿ ಸ್ಪರ್ಧೆಯಲ್ಲಿ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚೈತನ್ಯ ಪಟೇಲ್ ಜಿ.ಎಲ್. ಬಳ್ಳಾರಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಎಸ್.ಎಂ. ನಿಮಿಷ ದ್ವಿತೀಯ ಸ್ಥಾನ ಪಡೆದಿದ್ದಾಳೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: