ಸುದ್ದಿ ಸಂಕ್ಷಿಪ್ತ

ಕಲ್ಲು ಎತ್ತಿ ಹಾಕಿ ಅಮಾನುಷವಾಗಿ ಕೊಲೆ

ಮಂಗಳವಾರ ಬೆಳಿಗ್ಗೆ ವ್ಯಕ್ತಿಯೋರ್ವರ ಮೇಲೆ ಕಲ್ಲನ್ನು ಎತ್ತಿ ಹಾಕಿ ಅಮಾನುಷವಾಗಿ ಕೊಲೆಗೈದ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು-ಗುಂಡ್ಲುಪೇಟೆ ಹೆದ್ದಾರಿಯ ದೇವೀರಮ್ಮನ ಹಳ್ಳಿ ಬಳಿ ವ್ಯಕ್ತಿಯೋರ್ವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈಯ್ಯಲಾಗಿದೆ.

ಮೃತ ವ್ಯಕ್ತಿಯನ್ನು ನಂಜನಗೂಡು ತಾಲೂಕಿನ ಹೊಸೂರು ಗ್ರಾಮದ ಚಿನ್ನಸ್ವಾಮಿ(40) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ನಂಜನಗೂಡು ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ  ಚಿನ್ನಸ್ವಾಮಿ ಕೃಷಿಯ ಜೊತೆ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ

Leave a Reply

comments

Related Articles

error: