ಸುದ್ದಿ ಸಂಕ್ಷಿಪ್ತ

ಅ. 27: ಉದ್ಯೋಗ ಮೇಳ

ಚಾಮರಾಜನಗರ, ಅ. 23 – ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಾನವ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಹಿಂದೂ ಗ್ಲೋಬಲ್ ಸಲ್ಯೂಷನ್, ಯುರೇಕಾ ಫೋರ್ಬ್, ಫೆಡಲಿನ್ ಕಾರ್ಪೋರೇಟ್, ಎಂ.ಎನ್. ಈಗಲ್ ಟೆಕ್, ಎಲ್‍ಐಸಿ ಹಾಗೂ ಇತರೆ ಕಂಪನಿಗಳಿಂದ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯುಳ್ಳ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ನೇರ ಸಂದರ್ಶನಕ್ಕೆ ತಮ್ಮ ಸ್ವ ವಿವರಗಳೊಡನೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳನ್ನು (ದೂ.ಸಂ. 08226-224430) ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.(ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: