ಕರ್ನಾಟಕ

ವಿಷನ್-2025 ಡಾಕ್ಯುಮೆಂಟ್ ಅಗತ್ಯ ಸಿದ್ಧತೆ : ಎಂ.ಸತೀಶ್ ಕುಮಾರ್ ಸೂಚನೆ

ರಾಜ್ಯ(ಮಡಿಕೇರಿ) ಅ.23 :- ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರವು ವಿಷನ್-2025 ಡಾಕ್ಯುಮೆಂಟ್ ಹೆಸರಿನಲ್ಲಿ ನೀಲನಕ್ಷೆ ಮತ್ತು ಅನುಷ್ಠಾನ ಕಾರ್ಯ ಯೋಜನೆ ಸಿದ್ಧಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಇದೇ ಅ.31 ರಂದು ನಗರದ ಸಂತ ಜೋಸೆಫರ ಶಾಲೆಯಲ್ಲಿ ಕಾರ್ಯಗಾರ ನಡೆಯಲಿದ್ದು, ಈ ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಸಂಬಂಧಪಟ್ಟ ವಿವಿಧ ಹಂತದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ  ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ, ಮೂಲ ಸೌಕರ್ಯ, ಉದ್ಯೋಗ ಮತ್ತು ಕೌಶಲ್ಯ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ಮತ್ತು ಸಬಲೀಕರಣ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ದಿ, ಮಾಹಿತಿ ಮತ್ತು ಸಂಪರ್ಕ ಸೇವೆಗಳು, ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹೀಗೆ 13 ವಿಷಯಗಳನ್ನು ಒಳಗೊಂಡಂತೆ 5 ಗುಂಪುಗಳನ್ನು ರಚಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿನ ಪರಿಣಿತರನ್ನು ಗುರುತಿಸಿ ಅವರಿಂದ ಮಾಹಿತಿ/ಅಭಿಪ್ರಾಯ ಪಡೆಯುವುದರ ಜೊತೆಗೆ ವಿಚಾರ ಮಂಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಂ.ಸತೀಶ್ ಕುಮಾರ್ ಸಲಹೆ ಮಾಡಿದರು.  ನೋಡಲ್ ಅಧಿಕಾರಿ ಕೆ.ವಿ.ಸುರೇಶ್ ಅವರು ಮಾತನಾಡಿ ನವ ಕರ್ನಾಟಕ ವಿಷನ್-2025 ಸಂಬಂಧ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಯಾವ ರೀತಿ ಮಾಹಿತಿ ಸಂಗ್ರಹಿಸಬಹುದು. ಈ ಸಂಬಂಧ ಸಮಗ್ರ ಅಭಿವೃದ್ಧಿಗೆ ಯಾವ ರೀತಿ ಸಿದ್ದತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಅವರು ವಿವರಿಸಿದರು.

ಮತ್ತೋರ್ವ ನೋಡೆಲ್ ಅಧಿಕಾರಿ ಸಿ.ಜಗನ್ನಾಥ, ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ.ಯೋಜನಾ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಕೃಷಿ ಇಲಾಖೆಯ ಸಹಾಯಕ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಡಿ.ಎಂ.ದಾನೋಜಿ, ಮತ್ತಿತರರು ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: