ಮೈಸೂರು

ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ : ದಂಪತಿ ಪಾದಯಾತ್ರೆ

ಕಳಸಾ ಬಂಡೂರಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಮೈಸೂರಿನ ದಂಪತಿ ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮೈಸೂರಿನ ಸಿ.ಮಂಜುನಾಥ ಹಾಗೂ ಅವರ ಪತ್ನಿ ರತ್ನ ಮಂಗಳವಾರ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಳದಿಂದ ತಿರುಪತಿಗೆ ಪಾದಯಾತ್ರೆ ಹೊರಟಿದ್ದಾರೆ.

ಜೀವನದಿ ಕಾವೇರಿ ನೀರಿನ ಹಂಚಿಕೆಯ ಕುರಿತು ಹಾಗೂ ಉತ್ತರ ಕರ್ನಾಟಕದ ಕಳಸಾ ಬಂಡೂರಿ, ಮಹದಾಯಿ ಯೋಜನೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಮೈಸೂರಿನ ಈ ದಂಪತಿ ತಿರುಪತಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.

Leave a Reply

comments

Related Articles

error: