
ಮೈಸೂರು
ಕೃಷಿ ಸೇವಾ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ : ಅ.31 ಕೊನೆಯ ದಿನ
ಮೈಸೂರು (ಅ.24): ಜಂಟಿ ಕೃಷಿ ಕಚೇರಿ ವತಿಯಿಂದ 2017-18ನೆ ಸಾಲಿನ ಗ್ರಾಮೀಣ ಕೃಷಿ ಯಂತ್ರೋಪಕರಣ/ ಸೇವಾ ಕೇಂದ್ರಗಳ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅ. 31 ರವರೆಗೆ ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಮೈಸೂರು ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
(ಎನ್ಬಿಎನ್)