ಕರ್ನಾಟಕ

ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ

ರಾಜ್ಯ(ಬೆಂಗಳೂರು)ಅ.25:-  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲನಾ ತರಬೇತಿ ಕೇಂದ್ರದಲ್ಲಿ ಯಶಸ್ವಿಯಾಗಿ ತರಬೇತಿ ಪೂರೈಸಿದ ಪರಿಶಿಷ್ಟ ಜಾತಿ ಹಾಗೂ ಪಂಗಡದ 39 ಅಭ್ಯರ್ಥಿಗಳಿಗೆ ಇಂದು ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಿಸಲಾಯಿತು.

ಶಾಂತಿ ನಗರದ ಮಹಾನಗರ ಸಾರಿಗೆ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಅಭ್ಯರ್ಥಿಗಳಿಗೆ ಚಾಲನಾ ಪರವಾನಗಿ ವಿತರಿಸಿದರು. 2017-18ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಿಂದ ಭಾರಿ ವಾಹನ ತರಬೇತಿಗಾಗಿ ಒಟ್ಟು 55 ಅಭ್ಯರ್ಥಿಗಳನ್ನು ನೊಂದಣಿ ಮಾಡಿಕೊಳ್ಳಲಾಗಿತ್ತು. 45 ಅಭ್ಯರ್ಥಿಗಳು ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ್ದರು. 40 ಅಭ್ಯರ್ಥಿಗಳು ನೆಲಮಂಗಲ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಇಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ತರಬೇತಿ ಕೇಂದ್ರದ ಸಹಯೋಗದೊಂದಿಗೆ ಪ್ರಮಾಣ ಪತ್ರ ಹಾಗೂ ಚಾಲನಾ ಪರವಾನಗಿಯನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕ ರೇವಣ್ಣಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಲಿಂಗರಾಜು, ಬಿಎಂಟಿಸಿ ಎಂಡಿ ಪೊನ್ನುರಾಜ್, ಬಿಎಂಟಿಸಿ ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಡಾ.ಎ.ಎನ್. ಪ್ರಕಾಶ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ಗೋವಿಂದರಾಜು ಇತರರು ಉಪಸ್ಥಿತರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: