ಮೈಸೂರು

ಟಿಪ್ಪು ಜಯಂತಿಗೆ ವಿರೋಧ : ಪ್ರತಿಭಟನೆ

ನವೆಂಬರ್ 10ರಂದು ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸಲು ನಿರ್ಧರಿಸಿದೆ. ಆದರೆ ಬಿಜೆಪಿ ಟಿಪ್ಪು ಜಯಂತಿಯನ್ನು ಆಚರಿಸದಿರುವಂತೆ ಪ್ರತಿಭಟನೆಯನ್ನು ನಡೆಸುತ್ತಲೇ ಇದೆ. ಪ್ರತಿಭಟನೆ ಮಂಗಳವಾರವೂ ಮುಂದುವರಿದಿದೆ.

ಚಾಮುಂಡೇಶ್ವರಿ ವಿಧಾನ ಸಭಾಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮಂಗಳವಾರ ಹಿನಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟಿಪ್ಪು ಸುಲ್ತಾನ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೊಡಗಿನಲ್ಲಿ ಹಲವಾರು ಹಿಂದೂಗಳನ್ನು ಕೊಂದ ಟಿಪ್ಪುವಿನ ಜಯಂತಿ ಆಚರಿಸಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ ಗೌಡ ಮಾತನಾಡಿ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಅದರಿಂದ ರಸ್ತೆ ತಡೆದು ಪ್ರತಿಭಟಿಸುತ್ತಿದ್ದೇವೆ ಎಂದರು.

ಆರ್ ಎಸ್ ಎಸ್ ಕಾರ್ಯಕರ್ತ ಮಾಗಳಿ ರವಿ ಅವರ ಶವ ಪಿರಿಯಾಪಟ್ಟಣದ ಬಳಿ ಶುಕ್ರವಾರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ರವಿ ಕೊಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರಾದ ಗೋಪಾಲ್ ರಾವ್, ರೇವಣ್ಣ, ಶ್ರೀನಿವಾಸ್, ನಾಗೇಶ್, ರಾಜಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

Leave a Reply

comments

Related Articles

error: