ಕರ್ನಾಟಕ

ದೈಹಿಕ ಆರೋಗ್ಯದ ಜೊತೆ ಮತ್ತು ಮಾನಸಿಕ ಸಧೃಡತೆ ಬಹು ಮುಖ್ಯ

ಹಾಸನ (ಅ.25): ಮನುಷ್ಯ ಆರೋಗ್ಯವಾಗಿರಲು ದೈಹಿಕ ಮತ್ತು ಮಾನಸಿಕವಾಗಿ ಸಧೃಡರಾಗಿರುವುದು ಬಹು ಮುಖ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣಮೂರ್ತಿ ಬಿ.ಸಂಗಣ್ಣನವರ್ ಅವರು ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಿ.ಈ.ಜಿ. ಪದವಿ ಪೂರ್ವ ಕಾಲೇಜು, ಸರ್ಕಾರಿ ತಾಂತ್ರಿಕ ವಿದ್ಯಾಲಯ, ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಕಾರಾಗೃಹ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಾನ್ ಬೋಸ್ಕೋ ಐ.ಟಿ.ಐ ಕಾಲೇಜು, ಮಂಗಳ ನರ್ಸಿಂಗ್ ಕಾಲೇಜು, ಕಾಮಧೇನು ವೃದ್ಧಾಶ್ರಮ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನಸಾಮ್ಯಾರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೆಲಸ ನಿರ್ವಹಿಸುವ ಸ್ಥಳದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗದೆ ಕೆಲಸವನ್ನು ಪ್ರೀತಿಯಿಂದ ಹಾಗೂ ಸಹನೆಯಿಂದ ಮಾಡಿದರೆ ಮಾನಸಿಕ ಒತ್ತಡದಿಂದ ದೂರ ಉಳಿಯಬಹುದು ಎಂದು ಅವರು ಹೇಳಿದರು.

ಹಿಮ್ಸ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಸಂತೋಷ್ ಎಸ್.ವಿ ಅವರು ಮಾತನಾಡಿ ಮಾನಸಿಕ ಒತ್ತಡಕ್ಕೆ ಒಳಗಾದವರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಇದನ್ನು ತಪ್ಪಿಸಲು ಮಾನಸಿಕ ಖಿನ್ನತೆಗೆ ಒಳಗಾಗದ ರೀತಿಯಲ್ಲಿ ನೈರ್ಸಗಿಕವಾದ ವ್ಯಾಯಾಮ, ವಾಯು ವಿಹಾರ, ಯೋಗ, ಧ್ಯಾನ ಮತ್ತಿತರ ಅಭ್ಯಾಸಗಳನ್ನು ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ಹೇಳಿದರು.

ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣಮೂರ್ತಿ ಬಿ.ಸಂಗಣ್ಣನವರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುವರ್ಣಾ ಕೆ ಮಿರ್ಜಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ, 1ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚೆನ್ನಕೇಶವ ಎನ್.ಆರ್, 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಹೆಚ್.ಸಿ. ಶ್ಯಾಮ್‍ಪ್ರಸಾದ್ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಚಂದ್ರಶೇಖರ್ ಮರಗೂರು, 5ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಡಿ.ವೆಂಕಟೇಶ್, ವಕೀಲರು, ಸಿಬ್ಬಂದಿ ವರ್ಗದವರು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

(ಎನ್‍ಬಿಎನ್‍)

Leave a Reply

comments

Related Articles

error: