ಸುದ್ದಿ ಸಂಕ್ಷಿಪ್ತ

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಅ. 26: – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ 2017-18ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 31ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಳಿಗೆ ಕಚೇರಿ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: