ಸುದ್ದಿ ಸಂಕ್ಷಿಪ್ತ

ಅ.29 : ತುಳುವೆರ ಜನಪದ ಕೂಟದ ಸಭೆ

ರಾಜ್ಯ(ಮಡಿಕೇರಿ) ಅ. 26 : – ನಗರದಲ್ಲಿ ಸುಮಾರು 7 ಸಾವಿರಕ್ಕಿಂತಲೂ ಅಧಿಕ ಮಂದಿ ತುಳು ಭಾಷಿಕರಿದ್ದು, ಇವರೆಲ್ಲರನ್ನು ಒಂದೆಡೆ ಸಂಘಟಿಸುವ ಉದ್ದೇಶದಿಂದ ತುಳುವೆರ ಜನಪದ ಕೂಟದ ಮಡಿಕೇರಿ ನಗರ ಘಟಕವನ್ನು ರಚನೆ ಮಾಡಲು ನಿರ್ಧಾರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಸಮಿತಿ ರಚನಾ ಸಭೆಯು ಅ.29 ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ತುಳುವೆರ ಜನಪದ ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲಾ ತುಳುವೆರ ಜನಪದ ಕೂಟವು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ತುಳು ಭಾಷಿಕರ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ತುಳು ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಆಸ್ತಿತ್ವಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯಾದ್ಯಂತ ತಾಲೂಕು, ಪಟ್ಟಣ, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅ.29 ರಂದು ಕೂಟದ ತಾಲ್ಲೂಕು ಅಧ್ಯಕ್ಷರಾದ ಪ್ರಭುರೈ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯುವ ಸಭೆಯಲ್ಲಿ ತುಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರವಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಭು ರೈ ಅಧ್ಯಕ್ಷರು : 7829131743, ಎಂ.ಡಿ. ಸುರೇಶ್ ಉಪಾಧ್ಯಕ್ಷರು : 9448895962, ಬಿ. ಎನ್. ಜಯಪ್ಪ ಕಾರ್ಯದರ್ಶಿ : 9449050430 ಸಂಪರ್ಕಿಸಬಹುದುಎಂದು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: