ಮೈಸೂರು

ಟಿಪ್ಪು ಜಯಂತಿ : ಅರೆಸೇನಾ ಪಡೆ ನಿಯೋಜನೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರದ ಪತ್ರ

ಪ್ರಬಲ ವಿರೋಧದ ನಡುವೆಯು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದ್ದು, ಈ ವೇಳೆ ಯಾವುದೇ ಅವಘಡಗಳು ನಡೆಯದಂತೆ ಸೂಕ್ತ ಭದ್ರತೆ ಒದಗಿಸುವುದಕ್ಕಾಗಿ 1,500 ಹೆಚ್ಚುವರಿ ಅರೆಸೇನಾ ಪಡೆ ಕಳುಹಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಗೃಹಸಚಿವಾಲಯಕ್ಕೆ ಪತ್ರ ಬರೆದಿದೆ.

ನ.10ರಂದು ರಾಜ್ಯದಾದ್ಯಂತ ಟಿಪ್ಪು ಜಯಂತಿ ಆಚರಿಸಲು ಈಗಾಗಲೇ ತೀರ್ಮಾನಿಸಿ ಸಕಲ ಸಿದ್ಧತೆಗಳು ಪೂರ್ಣ ಹಂತದಲ್ಲಿದೆ. ಕಳೆದ ಬಾರಿ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಪ್ರತಿಭಟನೆಯಲ್ಲಿ ಕೊಡಗಿನ ಕುಟ್ಟಪ್ಪ ಮೃತಪಟ್ಟಿದ್ದರು. ಪ್ರಸ್ತಕ ಸಾಲಿನಲ್ಲಿ ಕೊಡಗಿನಲ್ಲಿ ಟಿಪ್ಪು ಜಯಂತಿಯಂದು ಕರಾಳ ದಿನಾಚರಣೆಯನ್ನು ಆಚರಿಸಲು ಹಲವಾರು ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗೃತ ಕ್ರಮ ಕೈಗೊಂಡಿದೆ.

Leave a Reply

comments

Related Articles

error: