ಕರ್ನಾಟಕ

ದೇವೇಗೌಡರ ಉಪಸ್ಥಿತಿಯಲ್ಲಿ ಹಾಸನ ಕನ್ನಡ ರಾಜ್ಯೋತ್ಸವ

ಹಾಸನ (ಅ.28) : ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 1 ರಂದು ಬೆಳಿಗ್ಗೆ 8-45 ಗಂಟೆಗೆ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರಾದ ಎ. ಮಂಜು ಅವರು ಬೆಳಿಗ್ಗೆ 8.45 ಗಂಟೆಗೆ ಶ್ರಿ ಭುವನೇಶ್ವರಿ ದೇವಿಗೆ ಪೂಜೆಸಲ್ಲಿಸಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡುವರು.

ಶಾಸಕರಾದ ಹೆಚ್.ಎಸ್. ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಸಮಾರಂಭದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್. ಶ್ವೇತಾ ದೇವರಾಜ್, ವಿಧಾನಸಭೆ ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಹೆಚ್.ಕೆ. ಕುಮಾರಸ್ವಾಮಿ, ವೈ.ಎನ್. ರುದ್ರೇಶಗೌಡ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಶಾಸಕರಾದ ಎಂ.ಎ. ಗೋಪಾಲಸ್ವಾಮಿ, ಕೆ.ಟಿ. ಶ್ರೀಕಂಠೇಗೌಡ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಹೆಚ್.ಪಿ. ಮೋಹನ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಆರ್. ಕೃಷ್ಣಕುಮಾರ್, ನಗರಸಭೆ ಅಧ್ಯಕ್ಷರಾದ ಡಾ. ಹೆಚ್.ಎಸ್. ಅನಿಲ್ ಕುಮಾರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಬಿ.ಟಿ ಸತೀಶ್ ಹಾಗೂ ಮತ್ತಿತರರು ಭಾಗವಹಿಸುವರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಸನ್ಮಾನ ನಡೆಯಲಿದೆ. ಅಂದು ಸಂಜೆ 5.30 ಗಂಟೆಗೆ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಪುಸ್ತಕ ಪ್ರದರ್ಶನ ಮತ್ತು ಮಾರಾಟ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದೆ.

(ಎನ್‍ಬಿಎನ್‍)

Leave a Reply

comments

Related Articles

error: