ಪ್ರಮುಖ ಸುದ್ದಿಮೈಸೂರು

ಹಿನಕಲ್ ನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಮೈಸೂರಿನ ವಿಜಯನಗರ 3 ನೇ ಹಂತ ಬಡಾವಣೆಗೆ ಹೊಂದಿಕೊಂಡಂತಿರುವ ಹಿನಕಲ್ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕ್ಷೇಮಾಭಿವೃದ್ಧಿಗೆ ಸಮುದಾಯ ಭವನ ನಿರ್ಮಿಸಲು ಅಂದಾಜು ವೆಚ್ಚ 22.20 ಲಕ್ಷ ರೂ. ವೆಚ್ಚದ ಕಾಮಗಾರಿಯ ಶಂಕುಸ್ಥಾಪನೆಯನ್ನು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅ‍ಧ್ಯಕ್ಷ ಡಿ.ಧ್ರುವಕುಮಾರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸತ್ಯನಾರಾಯಣ, ಮೂಡಾ ಸದಸ್ಯ ಎಲ್.ಭಾಸ್ಕರ್ ಗೌಡ, ಪ್ರಾಧಿಕಾರದ ಅಧೀಕ್ಷಕ ಅಭಿಯಂತರ ಶೀವಕುಮಾರ್, ಕಾರ್ಯಪಾಲಕ ಅಭಿಯಂತರ ರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ಹೇಮಂತ್ ಕುಮಾರ್, ಹಾಗೂ ಅಭಿಯಂತರುಗಳು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಸದಸ್ಯರು, ಹಿನಕಲ್ ಗ್ರಾಮ ಪಂಚಾಯಿತಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು/ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

comments

Related Articles

error: