ಮೈಸೂರು

ಸುನಿಲ್ ಬೋಸ್ ವಿಚಾರಣೆ ನವೆಂಬರ್ 29ಕ್ಕೆ

ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಿಸಿದಂತೆ ಲಂಚ ಪಡೆಯಲು ಸರ್ಕಾರಿ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ.ಮಹದೇವಪ್ರಸಾದ್ ಪುತ್ರ ಸುನೀಲ್ ಬೋಸ್ ಅವರ ವಿಚಾರಣೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನವೆಂಬರ್ 29ಕ್ಕೆ ಮುಂದೂಡಿದೆ.

ಸುನಿಲ್ ಬೋಸ್ ಖುದ್ದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿ ಹಾಜರಾತಿಯಿಂದ ವಿನಾಯಿತಿ ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ ನ್ಯಾಯಾಧೀಶ ಎಸ್.ಸುರೇಂದ್ರನಾಥ್ ಮಂಗಳವಾರದ ಮಟ್ಟಿಗೆ ವಿನಾಯಿತಿ ನೀಡಿದರು. ಪ್ರಕರಣದ ಇನ್ನೊಬ್ಬ ಆರೋಪಿ ರಾಜು ಪರ ವಕೀಲರು ರಾಜು ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದ್ದಿದ್ದು, ವಿಷಯ ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದ್ದಾರೆ.

Leave a Reply

comments

Related Articles

error: