ಮೈಸೂರು

ಮಹಿಳಾ ಮೀಸಲಾತಿಗೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಮನವಿ

ಮೈಸೂರು, ಅ. 29 : ಮೈಸೂರು ನಗರ ಹಾಗೂ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಕಮಿಟಿಯು ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಇದೇ 31ರಂದು ಹಣತೆಯ ಪ್ರಜ್ವಲತೆ ಹಾಗೂ ಮಹಿಳಾ ಮೀಸಲಾತಿ ಅಂಗೀಕರಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ನಗರಾಧ್ಯಕ್ಷೆ ಎಸ್.ಜೆ.ರಾಧಾಮಣಿ ರಾಜೇಗೌಡ ತಿಳಿಸಿದರು.

ಸೋಮವಾರ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಕಾರ್ಯಕ್ರಮವು ನಗರದ ಕಾಂಗ್ರೆಸ್ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಹಣತೆ ಪ್ರಜ್ವಲತೆ ಶ್ರದ್ದಾಂಜಲಿ ನಂತರ ಮಹಿಳಾ ಸಬಲೀಕರಣಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಅಂಗೀಕರಕ್ಕೆ ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 150ಕ್ಕೂ ಅಧಿಕ ಮಹಿಳಾ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ಹೇಳಿದರು. ಗೋಷ್ಠಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಸುಶೀಲ ಕೇಶವಮೂರ್ತಿ, ಸದಸ್ಯ ಎಸ್.ಎನ್.ವೀಣಾ, ಕೆಪಿಎಂಸಿಸಿ ಪ್ರಧಾನ ಕಾರ್ಯದರ್ಶಿ ಲತಾ ಮೋಹನ್,ಕೆ.ಆರ್ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಲೀಲಾ ಪಂಪಾಪತಿ ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: