ಮೈಸೂರು

ಬಿಸಿಯೂಟದ ಅಕ್ಕಿ ಕದ್ದು ಮಾರಿದ ಶಿಕ್ಷಕ: ಗ್ರಾಮಸ್ಥರಿಂದ ಶಾಲೆಗೆ ಬೀಗ

ಮೈಸೂರು,(ಎಚ್.ಡಿ.ಕೋಟೆ),ಅ.30-ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಿಕ್ಕಿ ಬಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ರಾಜ್ ಶೆಟ್ಟಿ ಅಕ್ಕಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಶಿಕ್ಷಕ.

ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸರ್ಕಾರ ನೀಡುವ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (ವರದಿ-ಕೆ.ಎಸ್, ಎಂ.ಎನ್)

Leave a Reply

comments

Related Articles

error: