ಮೈಸೂರು

ಚುನಾವಣೆ ನೀತಿ ಸಂಹಿತೆ ಸಾಧ್ಯತೆ : ಜನವರಿ ಅಂತ್ಯದೊಳಗಾಗಿ ಯೋಜನೆಗಳನ್ನು ಪೂರ್ಣಗೊಳಿಸಲು ಸೂಚನೆ

ಮೈಸೂರು (ಅ.30): 2018 ಫೆಬ್ರವರಿ ಮಾಹೆಯಿಂದ ಅಧಿಕಾರಿಗಳನ್ನು ಚುನಾವಣಾ ಆಯೋಗವು ಮುಂಬರುವ ಚುನಾವಣಾ ಕೆಲಸಕ್ಕೆ ನಿಯೋಜಿಸಿದ್ದಲ್ಲಿ, 2017-18 ನೇ ಸಾಲಿನಲ್ಲಿ ನಿಗಧಿಪಡಿಸಿರುವ ಗುರಿ ಸಾಧಿಸಲು ಹಾಗೂ ಚುನಾವಣಾ ಕಾರ್ಯ ನಿರ್ವಹಿಸಲು ಕಷ್ಟಕರವಾಗುತ್ತದೆ. 2017-18 ನೇ ಸಾಲಿಗೆ ನಿಗದಿಪಡಿಸಿರುವ ಗುರಿಯನ್ನು ಜನವರಿ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ತಿಳಿಸಿದರು.

ಅವರು ಇಂದು (ಸೋಮವಾರ) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಹಾಸ್ಟಲ್‍ಗಳ ವಿದ್ಯಾರ್ಥಿನಿಲಯಗಳಿಗೆ ಅವಶ್ಯವಿರುವ ನಿವೇಶನಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದಾಗ, ಉಸ್ತುವಾರಿ ಕಾರ್ಯದರ್ಶಿಗಳು ಮೈಸೂರು ನಗರಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಮನವಿ ಸಲ್ಲಿಸಿ ನಿವೇಶನಗಳನ್ನು ಪಡೆದುಕೊಳ್ಳಿ. ನಗರ ಪ್ರದೇಶದ ಹೊರಗಿದ್ದರು ನಿವೇಶನ ಚಿಂತಿಸಬೇಡಿ, ಮೂಲಭೂತ ವ್ಯವಸ್ಥೆಗಳು ಇದ್ದಲ್ಲಿ ನಿವೇಶನ ಪಡೆದು ಹಾಸ್ಟಲ್‍ಗಳನ್ನು ನಿರ್ಮಿಸಿ ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳು ಮೈಸೂರು ಜಿಲ್ಲೆಗೆ 33 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿದ್ದು, ಇವುಗಳಲ್ಲಿ ಒಂದು ಪೂರ್ಣಗೊಂಡಿದ್ದುವ, ನವೆಂಬರ್ ವೇಳೆಗೆ 1 ಹಾಗೂ ಫೆಬ್ರವರಿ ವೇಳೆಗೆ 6 ಪೂರ್ಣಗೊಳ್ಳಲಿದೆ ಎಂದು ಸಭೆಗೆ ಮಾಹಿತಿ ನೀಡಿದಾಗು ಕಾರ್ಯದರ್ಶಿಗಳು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹಾರಿಸಬಹುದು. ಇದು ಎರಡು ವರ್ಷಗಳ ಯೋಜನೆಯಾಗಿದ್ದು, 2017-18 ನೇ ಸಾಲಿನಲ್ಲಿ 13 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಪ್ರಯತ್ನಿಸುವಂತೆ ತಿಳಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಾಗ, ನೀರಿನ ಮೂಲ ಸರಿಯಾದ ರೀತಿ ದೊರಕುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದ ಅವರು 2017-18 ನೇ ಸಾಲಿನ ಆರ್ಥಿಕ ವರ್ಷದಲ್ಲಿ 7 ತಿಂಗಳು ಕಳೆದ್ದಿದ್ದು, ಎಲ್ಲಾ ಇಲಾಖೆಗಳು ನಿಗಧಿಪಡಿಸಿರುವ ಗುರಿಯಲ್ಲಿ ಕನಿಷ್ಠ ಶೇಕಡ 50 ರಷ್ಟಾದರೂ ಪೂರ್ಣಗೊಳಿಸಿರಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಂ. ಸೋಮಸಂದರ್ ಅವರು ಜಿಲ್ಲೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹಿತಯಲ್ಲಿ ಉತ್ತಮ ಮಳೆಯಾಗಿದೆ ಆದರೆ ಜೂನ್ ಮತ್ತು ಜುಲೈ ಮಾಹೆಯಲ್ಲಿ ಮಳೆಯ ಕೊರತೆ ಉಂಟಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರಂದೀಪ್ ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚಿನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಯೋಗೇಶ್ ಟಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಜಗದೀಶ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎಸ್. ಕಾಂತರಾಜು, ಹುಣಸೂರು ಉಪವಿಭಾಗಾಧಿಕರಿ ನಿತೀಶ್.ಕೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(ಎನ್‍ಬಿಎನ್‍)

Leave a Reply

comments

Related Articles

error: