ಮೈಸೂರು

ನ.1 ರಂದು ಕನ್ನಡ ರಾಜ್ಯೋತ್ಸವ : ಮೈಸೂರು ಜಿಲ್ಲಾಡಳಿತದಿಂದ ಸಿದ್ಧತೆ

ಮೈಸೂರು (ಅ.30): ಜಿಲ್ಲಾಡಳಿತದ ವತಿಯಿಂದ ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು.

ಬೆಳಿಗ್ಗೆ 8-30 ಗಂಟೆಗೆ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗುವುದು. ಹಾಗೂ 9 ಗಂಟೆಗೆ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಭುವನೇಶ್ವರಿ ದೇವಿ ಪುತ್ಥಳಿಗೆ ಪುಪ್ಪಾರ್ಚನೆ ಮಾಡಿದ ನಂತರ ಮೆರವಣಿಗೆಯು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಶೋಕ ರಸ್ತೆ ಮೂಲಕ ಚಲಿಸಿ ಪುರಭವನ ತಲುಪಲಿದೆ.

ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸುವರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಎಂ.ಜೆ.ರವಿಕುಮಾರ್, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಹೀಮಾ ಸುಲ್ತಾನ ನಜೀರ್ ಅಹಮದ್, ಲೋಕಸಭಾ ಸದಸ್ಯರುಗಳಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕರಾದ ಕೆ. ವೆಂಕಟೇಶ್, ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಎಂ.ಕೆ. ಸೋಮಶೇಖರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಹೆಚ್.ಪಿ. ಮಂಜುನಾಥ್, ಶಾಸಕರಾದ ವಾಸು, ಜಿ.ಟಿ. ದೇವೇಗೌಡ ವಾಸು, ಸಾ.ರಾ.ಮಹೇಶ್, ಎಸ್. ಚಿಕ್ಕಮಾದು, ಕಳಲೆ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಕೆ.ವಿ ನಾರಾಯಣಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಧ್ರುವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್ ಎನ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರಾದ ರತ್ನ ಲಕ್ಷ್ಮಣ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಿ. ನಟರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಹಾಗೂ ಉಪಾಧ್ಯಕ್ಷ ಎನ್.ಬಿ. ಮಂಜು ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಂದು ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ರವಿಕುಮಾರ್ ಎಂ.ಜೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: