ಮೈಸೂರು

ಗ್ರಾಮ ಸಹಾಯಕರನ್ನು ಡಿ-ದರ್ಜೆ ನೌಕರರನ್ನಾಗಿ ಮಾಡದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ರಾಜ್ಯ ಕಂದಾಯ ಇಲಾಖೆಯಲ್ಲಿ 38 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಇದುವರೆಗು ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರವು ಗ್ರಾಮಸಹಾಯಕರನ್ನು ಡಿ-ದರ್ಜೆ ನೌಕರರನ್ನಾಗಿ ಮಾಡಿಲ್ಲ. ಡಿ-ದರ್ಜೆ ನೌಕರರನ್ನಾಗಿ ಮಾಡುವುದರಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದ ವತಿಯಿಂದ ಸಾಂಕೇತಿಕ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ನಡೆದ ಸಾಂಕೇತಿಕ ಮುಷ್ಕರದಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು, ನಮಗೆ 10, 000ರೂ. ವೇತನ ನೀಡಲಾಗುತ್ತದೆ. ಅದರಿಂದ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ.ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ ನೀಡಲೂ ಸಾಧ್ಯವಾಗುತ್ತಿಲ್ಲ. ಅದರಿಂದ ಸರ್ಕಾರವು ಈ ಕೂಡಲೇ ಗ್ರಾಮ ಸಹಾಯಕರನ್ನು ಡಿ-ದರ್ಜೆಯ ನೌಕರರನ್ನಾಗಿ ನೇಮಕ ಮಾಡಬೇಕು. 7 ದಿನಗಳ ಒಳಗಾಗಿ ಸರ್ಕಾರ ಯಾವುದೇ ರೀತಿಯ ಕ್ರಮಕೈಗೊಳ್ಳದಿದ್ದಲ್ಲಿ ನವೆಂಬರ್ 21ರಿಂದ ನಡೆಯುವ ಚಳಿಗಾಲದ ಅಧಿವೇಶನದ ಆರಂಭದಲ್ಲಿ ಕುಟುಂಬ ಸಮೇತ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಯ್ಯ, ಮೈಸೂರು ಅಧ್ಯಕ್ಷ ಚಿಕ್ಕರಂಗಯ್ಯ, ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

comments

Related Articles

error: