ಕರ್ನಾಟಕ

ಅಸ್ತಿತ್ವದಲ್ಲೇ ಇಲ್ಲದ ಪಕ್ಷಕ್ಕೆ ಮರಳಲಾರೆ : ಕೆ.ಎಂ.ಗಣೇಶ್ ಸ್ಪಷ್ಟನೆ

ರಾಜ್ಯ(ಮಡಿಕೇರಿ) ಅ.30 :- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ತತ್ವ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ತಾವು ಹಾಗೂ ಇತರರು ಯಾವುದೇ ಕಾರಣಕ್ಕು ಮುಳುಗುತ್ತಿರುವ ಹಡಗಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲವೆಂದು ನಗರಸಭಾ ಸದಸ್ಯ ಕೆ.ಎಂ.ಗಣೇಶ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲೆ ಇಲ್ಲವೆಂದು ಟೀಕಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಇರುವ ಕಾರಣ ಪಕ್ಷ ಬಿಟ್ಟವರನ್ನು ಮರಳಿ ಬರುವಂತೆ ಒತ್ತಾಯಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಜೆಡಿಎಸ್ ನಾಯಕರಾದ ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಕೂಡ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಊಹಾಪೋಹದ ಪ್ರಚಾರವನ್ನು ಮಾಡಲಾಗುತ್ತಿದೆ. ಜೀವಿಜಯ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದರು. ಮುಂಬರುವ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗುವುದು ಖಚಿತವಾಗಿದ್ದು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿಗಾಗಿ ಶ್ರಮಿಸುವುದಾಗಿ ಗಣೇಶ್ ತಿಳಿಸಿದರು. ಜೆಡಿಎಸ್‍ನಲ್ಲಿ ಸ್ಥಾನಮಾನ ನೀಡಿದರೂ, ನೀಡದಿದ್ದರೂ ಪ್ರಾಮಾಣಿಕ ಕಾರ್ಯಕರ್ತನಾಗಿ ದುಡಿಯುವುದಾಗಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ಲೀಲಾ ಶೇಷಮ್ಮ, ಚೆಟ್ಟಳ್ಳಿ ಗ್ರಾಪಂ ಉಪಾಧ್ಯಕ್ಷರಾದ ಡೆನ್ನಿ ಬರೋಸ್, ಪ್ರಮುಖರಾದ ಸುಖೇಶ್ ಚಂಗಪ್ಪ, ಸುನಿಲ್ ಹಾಗೂ ಇಬ್ರಾಹಿಂ ಉಪಸ್ಥಿತರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: