ಕರ್ನಾಟಕ

ಸರ್ಕಾರಿ ಗೌರವದೊಡನೆ ಅಚ್ಯುತನ್ ಅಂತ್ಯ ಸಂಸ್ಕಾರ

ಬೆಂಗಳೂರು (ಅ.30) : ನಿನ್ನೆ ರಾತ್ರಿ ನಿಧನರಾದ ಹಿರಿಯ ಪತ್ರಕರ್ತ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸೇವೆಯ ನಿವೃತ್ತ ಅಧಿಕಾರಿ ಕೆ.ಎಸ್. ಅಚ್ಯುತನ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12-30 ಕ್ಕೆ ಪೀಣ್ಯ ಸಿಎಂಟಿಐ ಎದುರಿನ ಪುಣ್ಯಧಾಮ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು. ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು. ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಶ್ರೀ ದಿನೇಶ್ ಅಮಿನ್‍ಮಟ್ಟು ಅವರು ಸರ್ಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು.

(ಎನ್‍ಬಿಎನ್‍)

Leave a Reply

comments

Related Articles

error: