ಕರ್ನಾಟಕ

ಹುತಾತ್ಮ ಸುಬೇದಾರ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಶ್ರದ್ಧಾಂಜಲಿ

ರಾಜ್ಯ(ಮಡಿಕೇರಿ)ಅ.31:- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಇವರ ವತಿಯಿಂದ ಹುತಾತ್ಮ ಸುಬೇದಾರ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಮಂಗಳವಾರ ನಡೆಯಿತು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಮತ್ತಿತರ ಗಣ್ಯರು ಪುಷ್ಪನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ನಗರದ ಕೋಟೆ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ದೇಶದ ರಕ್ಷಣೆಗಾಗಿ ಬ್ರಿಟಿಷರ ವಿರುದ್ದ ಹೋರಾಡಿ ಗಲ್ಲುಶಿಕ್ಷೆಗೆ ಒಳಗಾದ ಗುಡ್ಡೆಮನೆ ಅಪ್ಪಯ್ಯಗೌಡರಲ್ಲಿ ಇದ್ದ ದೇಶಪ್ರೇಮ ಪ್ರತಿಯೊಬ್ಬರೂ ಮೆಚ್ಚುವಂತದ್ದು ಎಂದು ಅವರು ತಿಳಿಸಿದರು.ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಹುತಾತ್ಮ ಗುಡ್ಡೆಮನೆ ಅಪ್ಪಯ್ಯಗೌಡರಂತಹ ಸ್ವಾತಂತ್ರ್ಯ ಸೇನಾನಿಯನ್ನು ಸದಾ ಸ್ಮರಿಸುವಂತಾಗಬೇಕು ಎಂದರು.  ಹಲವು ಗಣ್ಯರು ಉಪಸ್ಥಿತರಿದ್ದರು

(ಕೆಸಿಐ,ಎಸ್.ಎಚ್)

Leave a Reply

comments

Related Articles

error: