ಮೈಸೂರು

ಜೆಎಸ್ಎಸ್ ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ ನ.11ರಂದು

ಜೆಎಸ್ಎಸ್ ವಿಶ್ವವಿದ್ಯಾನಿಲಯವು ತನ್ನ 7ನೇ ವಾರ್ಷಿಕ ಘಟಿಕೋತ್ಸವವನ್ನು ನ.11 ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದ ಶ‍್ರೀರಾಜೇಂದ್ರ ಸಭಾಂಗಣದಲ್ಲಿ ಆಚರಿಸಿಕೊಳ್ಳುತ್ತಿದೆ ಎಂದು ಜೆಎಸ್ಎಸ್ ವಿವಿಯ ಉಪಕುಲಪತಿ ಡಾ. ಬಿ. ಸುರೇಶ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರ ನೀತಿ ಆಯೋಗದ ಸದಸ್ಯ ಡಾ. ವಿಜಯ್ ಕುಮಾರ್ ಸಾರಸ್ವತ್ ಅವರು ಉಪಸ್ಥಿತರಿರುತ್ತಾರೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿದ್ದಾರೆ. ಒಟ್ಟು 1096 ವಿದ್ಯಾರ್ಥಿಗಳು ಈ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಲಿದ್ದಾರೆ. 18 ಸಂಶೋಧನಾ ವಿದ್ಯಾರ್ಥಿಗಳು, 3 ಸೂಪರ್ ಸ್ಪೆಷಾಲಿಟಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಹಾಗೂ 41 ವಿದ್ಯಾರ್ಥಿಗಳು ವಿವಿಧ ಚಿನ್ನದ ಪದಕ ಮತ್ತು ಬಹುಮಾನ ಸ್ವೀಕರಿಸಲಿದ್ದಾರೆ ಎಂದು ವಿವರವಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಎಸ್ಎಸ್ ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ವಿಜಯಸಿಂಹ, ಕುಲಸಚಿವ ಡಾ. ಬಿ. ಮಂಜುನಾಥ್, ದಂತ ವೈದ್ಯ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್, ಪಾರ್ಥಸಾರಥಿ ಇನ್ನಿತರರು ಹಾಜರಿದ್ದರು.

Leave a Reply

comments

Related Articles

error: