ಕರ್ನಾಟಕಮೈಸೂರು

ಕೈಮಗ್ಗ-ಜವಳಿ ಇಲಾಖೆ ತರಬೇತಿಗಾಗಿ ಅರ್ಜಿ ಆಹ್ವಾನ

ಮಂಡ್ಯ (ನ.2): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೂತನ ಜವಳಿ ನೀತಿ 2013-18 ರಡಿ 2017-18ನೇ ಸಾಲಿಗೆ ಇಲಾಖೆ ಅನುಮೋದಿತ ತಾಂತ್ರಿಕ ತರಬೇತಿ ಸಂಸ್ಥೆಗಳ ಮುಖಾಂತರ ನಿರುದ್ಯೋಗಿ ಯುವಕ ಯುವತಿಯರಿಗೆ 45 ದಿನಗಳ ಸೀವಿಂಗ್ ಮಿಷಿನ್ ಆಪರೇಟರ್, ಕೈಮಗ್ಗ ನೇಯ್ಗೆ ತರಬೇತಿಯನ್ನು ಮಂಡ್ಯ ಹಾಗೂ ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ತರಬೇತಿ ಸಂಘ ಸಂಸ್ಥೆಗಳಲ್ಲಿ ತಾಂತ್ರಿಕ ಭೋಧಕರಿಂದ ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಿ ತರಬೇತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಅಭ್ಯರ್ಥಿಗಳಿಗೆ ಇಲಾಖೆಯ ವತಿಯಿಂದ ಶಿಷ್ಯವೇತನ ನೀಡಲಾಗುವುದು.ಅಭ್ಯರ್ಥಿಗಳಿಗೆ ತರಬೇತಿ ಸಂಸ್ಥೆಗಳ ಮುಖಾಂತರ ಬೃಹತ್, ಮಾಧ್ಯಮ ಸಿದ್ಧ ಉಡುಪು ಘಟಕಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು.

ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಡ್ಯ ಇವರನ್ನು ಸಂಪರ್ಕಿಸಬಹುದು.

(ಎನ್‍ಬಿಎನ್‍)

Leave a Reply

comments

Related Articles

error: