ಮೈಸೂರು

ಬೈಕ್ ರ್ಯಾಲಿಯಲ್ಲಿ ಹೆಲ್ಮೆಟ್ ಧರಿಸದ ಬಿಜೆಪಿ ಕಾರ್ಯಕರ್ತರಿಗೆ ನೋಟಿಸ್ ಜಾರಿ: ವಿಕ್ರಮ್ ಆಮ್ಟೆ

ಮೈಸೂರು,ನ.2-ಬಿಜೆಪಿ ನವ ಕರ್ನಾಟಕ ಪರಿವರ್ತನಾ ರ್ಯಾಲಿ ಅಂಗವಾಗಿ ಬೈಕ್ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಲ್ಮೆಟ್ ಧರಿಸಿದೆ ಬೈಕ್ ರ್ಯಾಲಿಯಲ್ಲಿ ಭಾಗಿಯಾಗಿರುವವರಿಗೆ ನೋಟಿಸ್ ನೀಡುತ್ತೇವೆ ಎಂದು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ಹೇಳಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಬೈಕ್ ರ್ಯಾಲಿಯಲ್ಲಿ ತೆರಳಿದ್ದ ಬಿಜೆಪಿ ಕಾರ್ಯಕರ್ತರು ಹೆಲ್ಮೆಟ್ ಧರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಸಿಟಿವಿ ಹಾಗೂ ವಿಡಿಯೋ ಚಿತ್ರಣ ನೋಡಿ ಅವರಿಗೆ ನೋಟಿಸ್ ದಂಡ ವಿಧಿಸಲಾಗುವುದು ಎಂದಿದ್ದಾರೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: