ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮೂವರ ಬಂಧನ

ಮೈಸೂರು,ನ.2-ವೇಶ್ಯಾವಾಟಿಕೆಅಡ್ಡೆ ಮೇಲೆ ದಾಳಿ ನಡೆಸಿದ ಮೈಸೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಅವರಿಂದ ನಾಲ್ಕು ಸಾವಿರ ರೂ. ನಗದು ಹಾಗೂ 5 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಪ್ರೇಮಮ್ಮ, ಮಹಮ್ಮದ್ ಸಲ್ಮಾನ್‌, ಗುರುಮಲ್ಲಪ್ಪ ಬಂಧಿತ ಆರೋಪಿಗಳು. ನಗರದ ದಟ್ಟಗಳ್ಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: